Friday, 30 September 2011
Saturday, 17 September 2011
ಹುಡುಗಿ
ಮೊನ್ನೆ ಸಂಕ್ರಾತಿ ಹಬ್ಬದ ದಿನ ಗವಿ ಗಂಗಾಧರೇಶ್ವರ ದೇವಸ್ಥಾನದ ಅಂಗಳದಲ್ಲಿ ನಿಂತು ಗಾಳಿಗೆ ಹಾರಿ ಹಾರಿ ನಿನ್ನ ಕೆನ್ನೆಗೆ ಮುತ್ತಿಕ್ಕುತ್ತಿದ್ದ ಕೂದಲನ್ನು ಪದೇ ಪದೇ
ಹಿಂದಕ್ಕೆ ಸರಿಸುತ್ತಿದ್ದಾಗಲೇ ನಿನ್ನನ್ನು ನಾನು ನೋಡಿದ್ದು .ಮರುಕ್ಷಣವೇ ನನ್ನ ಮನಸಿನ ಮನೆಯ ತುಂಬೆಲ್ಲ ಒಲವ ಶ್ರಾವಣದ ಸಂಭ್ರಮ ಶುರುವಾಗಿ ಹೋಗಿತ್ತು .
ಹನುಮಂತನ ಬಾಲದಂತಿದ್ದ ಕ್ಯೂ ಬಿಸಿಲಲ್ಲಿ ಬೆವರಿಳಿಸುತ್ತಿದ್ದರೆ ದೇವರ ದರ್ಶನ ಬೇಡ ಎನಿಸುತ್ತಿತ್ತು .ಇನ್ನೊಂದಿಷ್ಟು ಹೊತ್ತು ನೋಡಿ ಮನೆಗೆ ಹೊರಟು ಬಿಡೋಣ
ಅಂದುಕೊಳ್ಳುತ್ತಿದ್ದವನ ಮುಂದೆ ಜಗತ್ತಿನ ಸೌಂದರ್ಯವೆಲ್ಲ ಹೆಣ್ಣಾಗಿ ರೂಪ ಪಡೆದಿದೆಯೇನೋ ಎಂಬಂತೆ ನೀನು ಕಾಣಿಸಿಕೊಂಡೆ , ಆಮೇಲೆ ನಾನು ನಾನಾಗಿ ಉಳಿಯಲಿಲ್ಲ .ಗರಿಗೆದರಿದ ಹಕ್ಕಿಯಂತಾಗಿ ಹೋಗಿದ್ದ ಮನಸಿನಲ್ಲಿ ನಿನ್ನ ಬಗೆಗಿನ ನೂರು ಭಾವನೆಗಳ ಸಂಕಲನ ,ಖಾಲಿ ಇದ್ದ ಎದೆಯ ತುಂಬಾ ಸಿಹಿ ಸಿಹಿ ಕನಸುಗಳ ವರ್ಣ ಸಂಕ್ರಮಣ .
ತುಸು ತುಸುವೇ ಕಮ್ಮಿಯಾಗುತ್ತಿದ್ದ ಕ್ಯೂ ಬ್ರೆಗನೆ ಮುಗಿದು ಹೋಗುವುದೇನೋ ಎಂಬ ಬೇಸರದಲ್ಲಿ ನಿನ್ನನ್ನು ದಿಟ್ಟಿಸುತ್ತಿದ್ದ ನನ್ನನ್ನು ಒಮ್ಮೆ ನೋಡಿದೆಯಲ್ಲ ! ನಿಜ ಹೇಳಲಾ ಹುಡುಗಿ
ಸಾವಿರ ಕೋಲ್ಮಿಂಚು ಒಮ್ಮೆಗೆ ಹೊಡೆದಂತಾಯ್ತು .
ಅಮಾವಾಸ್ಯೆಯ ಕತ್ತಲಲ್ಲಿ ಬೆಳದಿಂಗಳು ಸುರಿದಂತೆ ನಿನ್ನ ನಗುವಿಗೆ ಯಾರನ್ನು ಬೇಕಾದರೂ ಮೋಡಿ ಮಾಡಿ ಚಿತ್ತಾಗಿಸುವ ಶಕ್ತಿಯಿದೆ ಅನ್ನಿಸುತ್ತಿತ್ತು ,ಆದರೆ ಬೇರೆ ಯಾರು ಆ ನಗುವಿಗೆ ತುತ್ತಾಗದಿರಲಿ ಎಂದು ಮನಸ್ಸು ದೇವರಲ್ಲಿ ಬೇಡಿಕೊಳ್ಳುತ್ತಿತ್ತು .ದೇವರ ದರ್ಶನ ಮುಗಿಸಿಕೊಂಡು ಹೊರಬಂದವನ ಕಣ್ಣುಗಳು ನಿನ್ನ ಅರಸುತ್ತಿದ್ದರೆ ನೀನಾಗಲೇ ನಿನ್ನ ನೀಲಿ ನೀಲಿ ಸ್ಕೂಟಿಯ ಕಿವಿ ಹಿಂಡುತ್ತಿದ್ದೆ.ಕಣ್ಮುಚ್ಚಿ ತೆರೆಯುವಷ್ಟರಲ್ಲಿ ನಾನು ನಿನ್ನ ಎದುರಿಗಿದ್ದೆ ,ಗಾಬರಿಯಾದ ನಿನ್ನ ಕಂಗಳಲ್ಲಿ ಯಾರೀತ ಎಂಬ ಆತಂಕ ಪ್ರತಿಫಲಿಸುತ್ತಿತ್ತು .ಒಂದೇ ಉಸಿರಿನಲ್ಲಿ ನನ್ನ ಪರಿಚಯ ,ಊರು ,ಕೆಲಸ ,ಅಭ್ಯಾಸ, ಹವ್ಯಾಸ ಎಲ್ಲವನ್ನು ಹೇಳಿಕೊಂಡೆ .ಕಣ್ಣು ಮಿಟುಕಿಸದೆ ಕೇಳಿಸಿಕೊಂಡ ನೀನು' ಓಕೆ ' ಆದರೆ ಇದನ್ನೆಲ್ಲಾ ನನ್ನ
ಹತ್ತಿರ ಯಾಕೆ ಹೇಳುತ್ತಿದ್ದೀರಾ? ಅಂತಂದೆ .
ಮಾಮರ ಚಿಗುರಿದ ಸಂಭ್ರಮದಲ್ಲಿ ಕೋಗಿಲೆಯೊಂದು ಖುಷಿಯಿಂದ ಮಾತನಾಡಿದಂತಿತ್ತು ನಿನ್ನ ದನಿ.ಇನ್ನೇನು ಹೊರಡಬೇಕೆಂಬ ಅವಸರದಲ್ಲಿದ್ದ ನಿನಗೆ ಕೈಗೆ ಸಿಕ್ಕ ಹಾಳೆಯ ಚೂರೊಂದರಲ್ಲಿ ನನ್ನ ಮೊಬೈಲ್ ನಂ ಬರೆದು ದಯವಿಟ್ಟು ಕರೆ ಮಾಡಿ ,ನಿಮ್ಮ ಕಾಲ್ ಗಾಗಿ ಕಾಯುತ್ತಿರುತ್ತೇನೆ ಅಂತ್ಹೇಳಿ ಹಾಳೆಯ ಚೂರನ್ನು ನಿನ್ನ ಕೈಗಿಟ್ಟೆ.ಬಹುಶ ನನ್ನನ್ನು ನೀನು ಎಲ್ಲೋ ತಲೆ ಕೆಟ್ಟವನಿರಬೇಕು ಎಂದು ಕೊಂಡಿರಬೇಕು . ನಿಜ ನಂಗೆ ತಲೆ ಕೆಟ್ಟಿರಲಿಲ್ಲ,ಮನಸು ಕೆಟ್ಟಿತ್ತು ,ಅದು ನೀನೆ ಬೇಕು ಎಂದು ತೀರ್ಮಾನಿಸಿಯಾಗಿತ್ತು .
ನೀನು ಕಾಲ್ ಮಾಡೇ ಮಾಡ್ತಿಯ ಅಂತ ನನ್ನ ಮನಸು ಹೇಳುತ್ತಿತ್ತು,ಅಥವಾ ಹಾಗೆನಿಸುತ್ತಿತ್ತು .ಕ್ಷಣಗಳು ದಿನವಾದಂತೆ ,ದಿನಗಳು ಯುಗವಾದಂತೆ ಭಾಸವಾಗುತಿತ್ತು .ನಿನ್ನ ಪ್ರೀತಿಯ ಕರೆಗಾಗಿ ಕಾದು ಕಾದು ಸೀದುಹೋದೆ ಗೆಳತಿ ,ರಾಮನಿಗೆ ಶಬರಿ ಕಾದಂತೆ .ಅಲ್ಲಿ ಶಬರಿಗೆ ರಾಮ ಬರುವನೆಂಬ ನಂಬಿಕೆಯಾದರು ಇತ್ತು ,ಆದರೆ ಅಂತ ನೀರಿಕ್ಷೆಗಳು ನಿನ್ನ ಬಗ್ಗೆಯೂ ಇತ್ತ ? ಇಲ್ಲ ಖಂಡಿತ ಇರಲಿಲ್ಲ .ಆಗಷ್ಟೆ ನೋಡಿ ,ಕ್ಷಣದಲ್ಲಿ ಪ್ರೀತಿ ಹುಟ್ಟಿ ತಕ್ಷಣವೇ ಮೊಬೈಲ್ ನಂ ಕೊಟ್ಟು ಕರೆ ಮಾಡಿ ಅಂದವನ ಮನಸ್ಥಿತಿ ನೋಡಿ ನೀನು ಕೇವಲ ನಕ್ಕಿರಬೇಕು ,ಕೊನೆ ಕೊನೆಗೆ ನನಗೆ ಹಾಗೆನಿಸುತ್ತಿತ್ತು .ಆದರೆ ಹುಡುಗಿ ಪ್ರೀತಿಗೆ ಮಾತ್ರ ಇಂಥ ಹುಚ್ಹುಗಳಿರುತ್ತವೆ ಎಂದು ನಂಬಿದವನು ನಾನು .ನನ್ನ ಪಾಲಿಗೆ ನೀನೆಂಬುದು ಇನ್ನು ಕನಸು ಅಂದುಕೊಂಡು ನಿರಾಳವಾಗುತ್ತಿದ್ದವನ ಮನಸು ಮತ್ತೆ ನವಿಲಿನಂತಾಗಿದ್ದು ನಿನ್ನ ಮೊದಲ ಮೆಸೇಜ್ ಬಂದಾಗ ," ಹೇಗಿದ್ದೀರಿ" ಎಂಬ ಮೆಸೇಜ್ ನೋಡಿ ಅದು ನಿನ್ನದೇ ಇರಬಹುದೇ ಎಂಬ ಆಸೆಯಲ್ಲಿ" ಚನ್ನಾಗಿದ್ದೇನೆ ,ನೀವು ಯಾರು "? ಎಂಬ ನನ್ನ ಪ್ರಶ್ನೆಗೆ ಆ ಕಡೆಯಿಂದ ಬಂದ ಉತ್ತರ "ಗೆಸ್ಸ್ ಮಾಡಿ ಫ್ರೆಂಡ್ "
ಅದನ್ನು ನೋಡಿದ ಮೇಲೆ ಅದು ನಿನ್ನದೇ ಎಂದು ಗೊತ್ತಾಗಿ ಹೋಯ್ತು .ಆದರೆ ಅದನ್ನು ಹೇಳಿಕೊಳ್ಳದೆ ಪರಸ್ಪರ ತರಲೆ,ಹುಸಿಕೋಪ ,ಎಲ್ಲವು ವಿನಿಮಯವಾಯ್ತು .ಪರಿಚಯದಿಂದ ಸಲುಗೆ ಬೆಳೆಯಿತು .ಸಲುಗೆ ನಮ್ಮಿಬ್ಬರನ್ನು ಮತ್ತೊಮ್ಮೆ ಮುಖಾಮುಖಿಯಾಗಿಸಿತು .ಆಡಿದ ಮಾತುಗಳಿಗೆ ,ಕೇಳಿಸಿಕೊಂಡ ಜೋಕುಗಳಿಗೆ, ಹಿತವಾಗಿ ಕಾಡಿದ ಹಾಡುಗಳಿಗೆ
ಇಬ್ಬರು ಮನಸಾರೆ ಸೆರೆಯಾದೆವು.ಗಾಂಧಿ ಬಜಾರಿನ ರಸ್ತೆಗಳು ,ಆಶ್ರಮದ ಕಲ್ಲು ಬೆಂಚುಗಳು ,ಎಸ್ ಎಲ್ ವಿ ಹೋಟೆಲ್ಲಿನ ಟೇಬಲ್ಲುಗಳು ನಮ್ಮ ಓಡಾಟ ,ಒಡನಾಟಕ್ಕೆ
ಸಾಕ್ಷಿಯಾದವು .ಆದರು ನಾವು ಒಬ್ಬರಿಗೊಬ್ಬರು ಇಷ್ಟ ಅಂತ ಹೇಳಿಕೊಳ್ಳಲೇ ಇಲ್ಲ .ಪ್ರೀತಿಯ ಮಾತು ಝರಿಯಾಗಿ ಹರಿಯಲೇ ಇಲ್ಲ .ಜೀವದ ಗೆಳತಿಯಂತಾಗಿ ಹೋಗಿದ್ದ ನೀನು
ದಿನಕ್ಕೊಂದು ಸಲ ಕರೆ ಮಾಡದಿದ್ದರೆ ,ಗಂಟೆಗೊಂದು ಮೆಸೇಜು ಕಲಿಸದಿದ್ದರೆ ,ವಾರಕ್ಕೆರಡು ಸಲ ಕಾಣಿಸದಿದ್ದರೆ ನನ್ನಲ್ಲೊಂದು ಅವ್ಯಕ್ತ ಭಯ ಶುರುವಾಗುತ್ತಿತ್ತು .ವಿನಾಕಾರಣ
ನೀನು ನನ್ನ ಕೈ ತಪ್ಪಿ ಹೋಗಿ ಬಿಡುವೆಯ ಎಂಬ ಆತಂಕ ನನ್ನನ್ನು ಧಾವಂತಕ್ಕೆ ಈಡು ಮಾಡುತ್ತಿತ್ತು .ನೀನಂದ್ರೆ ನಂಗಿಷ್ಟ ಕಣೇ ಅಂತ ಸಾವಿರ ಸಲ ಹೇಳಲು ಬಂದವನಿಗೆ
ನಿನ್ನ ಮುಖ ನೋಡಿದಾಕ್ಷಣ ನಾಲಿಗೆ ಹೊರಳುತ್ತಿರಲಿಲ್ಲ .ಅಪ್ಯಾಯಮಾನ ಗೆಳೆತನದ ಖುಷಿ ಹಾಳಾಗಿ ಹೋಗಬಹುದೆನ್ನುವ ದಿಗಿಲು ನನ್ನನ್ನು ಮೂಕನನ್ನಾಗಿಸುತ್ತಿತ್ತು ತಿಳಿಯಲಾರದ ತಳಮಳಗಳು ಮತ್ತು ಮನಸಿನ ಬಗೆಹರಿಯದ ದ್ವಂದ್ವಗಳಿಂದ ಹೊಯ್ದಾಡುತ್ತಿದ್ದ ನನ್ನ ಮನಸಿನ ಮಾತು ನಿನಗೆ ಅರ್ಥವಾಗುತ್ತಿತ್ತಾ ?
ಮೋಡ ಕಟ್ಟಿ ಇನ್ನೇನು ಮಳೆಯಾಗಬಹುದೆಂಬ ವಾತಾವರಣವಿದ್ದ ಸಂಜೆಯೊಂದರಲ್ಲಿ ಏಕಾಂತವನ್ನು ಎಂಜಾಯ್ ಮಾಡುತ್ತ ನಡೆಯುತ್ತಿದ್ದವನ ಬೆನ್ನ ಹಿಂದಿನಿಂದ " ಐ ಲವ್ ಯು ಕಣೋ ,ನೀನೆ ಹೇಳ್ತಿಯ ಅಂತ ಕಾಯುತ್ತಿದ್ದೆ .ಮನೆಯಲ್ಲಿ ನನ್ನ ಮದುವೆ ಮಾತುಕತೆ ನಡೆಯುತ್ತಿದೆ ,ನಿನ್ನ ಬಿಟ್ಟು ನನ್ನ ಮನಸಿನಲ್ಲಿ ಇನ್ಯಾರಿಗೂ ಜಾಗವಿಲ್ಲ ಕಣೋ
ನಿನಗೂ ನಾನಂದ್ರೆ ಇಷ್ಟ ಅಲ್ವೇನೋ " ? ಅನ್ನುವ ಮಾತು ಕೇಳಿ ತಿರುಗಿದೆ ,ಇಬ್ಬರ ಕಣ್ಣಲ್ಲೂ ಮಾತಿಗೆ ನಿಲುಕದ ಸಂಭ್ರಮವಿತ್ತು .ಹಾಗೆ ತಬ್ಬಿಕೊಂಡೆ ,ಸುರಿದ ಮಳೆಗೆ ದೇಹ ಮತ್ತು ಮನಸು ತೊಪ್ಪೆಯಾಗಿ ಹೋಯ್ತು .......

Friday, 16 September 2011
ನಿನ್ನೆಗಳಲ್ಲಿ ಮಲೆತು
ನಾರುತ್ತಿರುವ ಭವಿಷ್ಯದ ನಾಳೆಗಳನ್ನು
ವರ್ತಮಾನಕ್ಕೆ ತರಲು
ಹೆಣಗುತ್ತೇನೆ
ಕತ್ತು ತುಳಿದು
ಉಸಿರು ನಿಲ್ಲಿಸುವ
ಹರಾಮಿ ಹುನ್ನಾರಗಳ ಮೀರಿ
ಗರಿಕೆಯಾದರೂ ಸಿಗಲೆಂದು
ಆಸೆಯಿಂದ ಕೈ ಚಾಚುತ್ತೇನೆ
ಕಂಡರೂ ಕಾಣದಂತೆ ನಕ್ಕು
ಅಬ್ಬರಿಸುವ ಜೀವರೂಪದ ವಿರೂಪಗಳ
ಕೇಕೆಗೆ ಬೆಚ್ಚಿ ಭಯದಿ ಬಿಕ್ಕುತ್ತೇನೆ
ಸಾವಿರ ಸಂಕೋಲೆಗಳ ಬಿಗಿಬಂಧದಲ್ಲಿ
ನರಳುವ ನಿತ್ರಾಣ ದೇಹಕೆ ಕೊಂಚ
ಶಕ್ತಿ ತುಂಬಿ ,ಒಂದಿಷ್ಟು ಬೆಳಕು
ತೋರಿಸುವರಾರು ಎಂದು
ಬಿದ್ದಲ್ಲೇ ಬಡಬಡಿಸುತ್ತೇನೆ
ಸಂಚು ಹೂಡುವ ವಂಚಕ
ಭೂತಕಾಲದ ಇಕ್ಕಳದಲ್ಲಿ
ಸಿಕ್ಕು ಮತ್ತೆ ಮತ್ತೆ ಸಾಯುತ್ತೇನೆಒಂದು ಸಾಲಿನ ಕಥೆ
ಇವಳಿಂದ ಮುಕ್ತಿ ಬೇಕು ನನಗೆ ,ಇವಳನ್ನು ಮುಗಿಸಿಬಿಡಬೇಕು ಎಂದು ಕೊಳ್ಳುತ್ತಿದ್ದಂತೆ ಹೆಂಡತಿ ಕುಡಿಯಲು ಹಾಲು ತಂದು ಕೊಟ್ಟಳು .ಕುಡಿದವನು ಮತ್ತೆ ಮೇಲೇಳಲಿಲ್ಲ .ಅವನಿಚ್ಹೆಯಂತೆ ಅವಳಿಂದ ಮುಕ್ತಿ ಪಡೆದ.
ಯಾಕೋ ಬೇಜಾರು .........
ಯಾರ ಮುಖವೂ
ಮನಸಲಿ ನಿಲ್ಲುತ್ತಿಲ್ಲ
ಯಾವ ಕನಸು
ಕಣ್ಣಿಗೆ ಹತ್ತುತ್ತಿಲ್ಲ
ಕಡ ತಂದ ಕನಸುಗಳ
ಎದೆಯೊಳಗೆ ಕರೆತರಲು
ಮನಸಿಗೂ
ಮನಸಿಲ್ಲ .....
Tuesday, 13 September 2011
Monday, 12 September 2011
Friday, 9 September 2011
ಕನಸಿಗೆ ಬಂದವಳು ಮನಸಿಗೆ ಬರಬಾರದೇ ?
ಗೆಳತಿ
ಗೆಳೆಯರದೆಲ್ಲ ಒಂದೇ ತಕರಾರು .ಭಾನುವಾರದ ಇಳಿಸಂಜೆಯಲಿ,ಬಿಡುವಿಲ್ಲದೆ ಮಾಡುತಿದ್ದ ಮೆಸೇಜುಗಳಲ್ಲಿ ,ಲೋಕಾಭಿರಾಮವಾಗಿ ಹರಟುತ್ತಿದ್ದ ಫೋನಿನಲಿ ಇಡಿಯಾಗಿ ಸಿಗುತ್ತಿದ್ದ ನಾನು ಇತ್ತೀಚಿಗೆ ಕೈಗೆ ಸಿಗುತ್ತಿಲ್ಲ ಅಂತ ಅವರಲ್ಲಿ ಕೊಂಚ ಗುಮಾನಿ ಬೆರೆತ ಕೋಪ.ನಿಜ ಹೇಳ್ಬೇಕಂದ್ರೆ ಗೆಳೆಯರಿಗಿಂತ ಮೊದಲು ನನಗೆ ಹಾಗೆನಿಸುತ್ತಿದೆ .ನಿದ್ರೆ ಬರದ ಮುಂಜಾವೊಂದರಲ್ಲಿ ಆವರಿಸಿಕೊಂಡ ಸಣ್ಣ ಮಂಪರಿಗೆ ಹಾಗೆ ಜಾರಿದವನ ಕನಸಿಗೆ ನೀನು ಬಂದು ಹೋದ ಮೇಲೆ ನಾನು ನಾನಾಗಿ ಉಳಿದಿಲ್ಲ .
ಶ್ರಾವಣದ ಮೊದಲ ಮಳೆ ಬಿದ್ದ ಮೇಲೆ ಹೊರಡುವ ಮಣ್ಣ ಘಮದಂತೆ ನನ್ನ ಮೈ ಮನಸಿನ ತುಂಬೆಲ್ಲ ನೀನೆ ತುಂಬಿಕೊಂಡ ಮೇಲೆ ಗೆಳೆಯರೆಲ್ಲ ಹೇಳಿದ "ಏನೋ ಆಗಿದೆ ,ನನಗೇನೋ ಆಗಿದೆ " ಅನ್ನುವ ಮಾತು ನಿಜ ಅನ್ನಿಸತೊದಗಿದ್ದು . ಮೊನ್ನೆ ಮೊನ್ನೆ ತಾನೇ ನೀನು ಗಿರಿನಗರದ ವೆಂಕಟರಮಣ ದೇವಸ್ಥಾನದ ತಿರುವಿನಲ್ಲಿ ನನ್ನ ಮುಂದಿನಿಂದ ಹಾದು ಹೋದೆಯಲ್ಲಾ ? ಆಗಲೇ ಗೊತ್ತಾಗಿದ್ದು ಕನಸಿಗೆ ಬಂದಿದ್ದು ನೀನೆ ಅಂತ . ಅಮೇಲೆನಿದೆ,ಮನಸೆಲ್ಲ ನಿನ್ನಲ್ಲೇ ನೆಲೆಯಾಯಿತು ,ನಿನ್ನ ಅರಸುವುದೇ ಉದ್ಯೋಗವಾಯಿತು . ಇಡೀ ಗಿರಿನಗರದ ಗಲ್ಲಿ ಗಲ್ಲಿಗಳಲ್ಲಿ ,ಶಾಂತಿಸಾಗರ ಹೋಟೆಲಿನ ಗಜಿ ಬಿಜಿಯಲ್ಲಿ ,ಸೀತಾ
ಸರ್ಕಲ್ ನ ಆಸುಪಾಸಿನಲ್ಲಿ ಎಂದಾದರು ಎದುರಾಗಬಹುದೆಂಬ ಆಸೆಯಲಿ ಕಾದು ಕೆಂಡವಾಗುತ್ತಿದ್ದವನ ಜೊತೆ ನನ್ನ ಪ್ರೀತಿಯ ಪಲ್ಸರ್ ಬಿಟ್ಟರೆ ಇನ್ಯಾರು ಇರಲಿಲ್ಲ .ಪ್ರೀತಿಯಲ್ಲಿ ಬಿದ್ದವರಿಗೆ ಜಗತಿನ ಪರಿವೆ ಇರುವುದಿಲ್ಲ ಎನ್ನುವುದಕ್ಕೆ ನಾನೇ ಸಾಕ್ಷಿಯಾಗಿದ್ದೆ .ನನ್ನಷ್ಟು ಸುಖಿ ಬೇರೆ ಇಲ್ಲ ಎನಿಸುತ್ತಿತ್ತು .ಮನಸು ನಿನ್ನನ್ನು ಹುಡುಕುವ ಖುಷಿಯನ್ನು ಎಂಜಾಯ್ ಮಾಡುತ್ತಿತ್ತು .ಅದು ನೀನೆ ಬೇಕು ಎನ್ನುವ ಹಟಕ್ಕೆ ಬಿದ್ದಿತ್ತು .
ಅದೊಂದು ಸಂಜೆ ಆಗಷ್ಟೆ ಸೂರ್ಯ ಬೆಟ್ಟಗಳ ನಡುವಿನಿಂದ ಮರೆಯಾಗಿ ,ಕತ್ತಲನ್ನು ಸೀಳಿಕೊಂಡು ಚಂದಿರ ನಗುವ ಹೊತ್ತಿಗೆ ಕಂಡು ಕಾಣದಂತ ತುಂತುರು ಮಳೆ ಶುರುವಾಗಿತ್ತು .ಗೆಳೆಯನೊಬ್ಬನ ಮೊಬೈಲ್ ಕರೆಗೆ ಉತ್ತರಿಸಲು ಬೈಕ್ ಪಕ್ಕಕ್ಕೆ ನಿಲ್ಲಿಸಿ ಮೊಬೈಲ್ ಕೈಗೆತ್ತಿಕೊಂಡು ಹಲೋ ಎಂದು ಹಿಂದಕ್ಕೆ ತಿರುಗಿದೆ , ಜಸ್ಟ್ ಕಣ್ ಕಣ್ಣ ಸಲಿಗೆ ಅಷ್ಟೇ. ಇದೇನು ಕನಸೋ ಇಲ್ಲ ಭ್ರಮೆಯೋ ಒಂದು ಗೊತ್ತಾಗದ ಅಯೋಮಯ ಸ್ಥಿತಿಯಲ್ಲಿ ನಾನಿದ್ದೆ ,ಕಾರಣ ಎದುರಲ್ಲಿ ನೀನಿದ್ದೆ ..
ಹಲೋ ಹಲೋ ಎಂದು ಅತ್ತ ಕಡೆಯಿಂದ ಬಾಯಿ ಬಡಿದುಕೊಳ್ಳುತ್ತಿದ್ದ ಗೆಳೆಯನ ದನಿ ನನಗೆ ಕೇಳಿಸುತ್ತಿರಲಿಲ್ಲ .ಮೊಬೈಲ್ ಜೇಬಿಗೆ ತುರುಕಿದವನೇ ನಿನ್ನ ಪಕ್ಕದಲ್ಲಿ ಬಂದು ನಿಂತೆ .ಮಾತಿಲ್ಲ ಕಥೆಯಿಲ್ಲ .ಆರಂಬವಾದ ಪ್ರೀತಿ ಮುಂದುವರೆಯುವುದಾದರೂ ಹೇಗೆ ಎಂಬ ತಳಮಳದಲ್ಲಿ ತಲ್ಲಣಿಸುತ್ತಿದ್ದವನ ಕೈಗೊಮ್ಮೆ
ನಿನ್ನ ಭುಜ ಅಕಸ್ಮಾತ್ ತಾಗಿದಂತಾಗಿ ನಿನ್ನತ್ತ ತಿರುಗಿದೆ ,ಸಾರಿ ಎಂಬ ಎರಡಕ್ಷರದ ದನಿಯಾ ಮೋಡಿಗೆ ಚಿತ್ತಾಗಿ ಹೋದೆ .ಹಾಗೆ ಸುಮ್ಮನೆ ಕಿರುನಗೆಯೊಂದನ್ನು ಎಸೆದು ಇನ್ನಷ್ಟು ಹತ್ತಿರಕ್ಕೆ ಸರಿದೆ . ಬಿಗಿಯಾದ ಜೀನ್ಸ್ ಮೇಲೆ ಮರೂನ್ ಕಲರಿನ ಟಾಪ್ ಹಾಕಿಕೊಂಡು ಬೆನ್ನ ಮೇಲೆ ಹರವಿಕೊಂಡ
ರೇಷ್ಮೆಯಂಥ ಕೂದಲು ಮೆಲ್ಲಗೆ ಬೀಸುತ್ತಿದ್ದ ತಂಗಾಳಿಗೆ ಅತ್ತಿತ್ತ ಸರಿದಾಡುತ್ತಿದ್ದರೆ ಮನಸ್ಸು ತನ್ನಷ್ಟಕ್ಕೆ ತಾನೆ ಹಾಡಲು ಶುರು ಮಾಡಿತ್ತು .ಸಣ್ಣಗೆ ಹನಿಯುತ್ತಿದ್ದ ಮಳೆ ಸ್ವಲ್ಪ ಸ್ವಲ್ಪವೇ ಜೋರಾಗುತ್ತಿದ್ದಂತೆ ನೀನು ಕಾಂಪ್ಲೆಕ್ಸಿನ ಮೆಟ್ಟಿಲುಗಳ ಕಡೆಗೆ ಹೆಜ್ಜೆ ಇಡತೊಡಗಿದೆ.ಹತ್ತುತ್ತಿದ್ದ ಮೆಟ್ಟಿಲು ಎಡವಿ ತಡವರಿಸುತ್ತಿದ್ದವಳನ್ನು ಹಿಂದೆಯೇ ಇದ್ದ ನಾನು ಕೈ ಕೊಟ್ಟು ಹಿಡಿದುಕೊಂಡೆ .ಒಂದು ಕ್ಷಣ ನರನರವೂ ಕಂಪಿಸಿದಂತಾಯ್ತು ,ಥ್ಯಾಂಕ್ ಯು ಎಂಬ ಮಾತು ಕೇಳಿ ಬದುಕೇ ಸಾರ್ಥಕವಾದಂತಾಯ್ತು.ತುಂತುರು ಮಳೆಯಲ್ಲಿ ಮಸುಕು ಮಸುಕು ಕತ್ತಲೆಯಲ್ಲಿ ನಾವಿಬ್ಬರು ಪರಿಚಯದ ಗೆಳೆಯ ಗೆಳತಿಯರಂತೆ ಒಂದಿಷ್ಟು ಮಾತಾಡಿಕೊಂಡೆವು .ನನ್ನ ಮನದಿಂಗಿತವನ್ನು ನಿನ್ನ ಮನಸ್ಸಿಗೆ ತಲುಪಿಸುವುದು ಹೇಗೆ ಎಂಬ ಯೋಚನೆಯಲ್ಲಿರುವಾಗಲೇ ಮಳೆ ನಿಂತಿತು ,ಮಾತು ಮುಗಿಯಿತು .
ಮತ್ತೆ ಸಿಗ್ತೀನಿ ಎಂಬ ಭರವಸೆಯನ್ನು ಕಣ್ಣಂಚಲಿ ತುಳುಕಿಸುತ್ತ (ನನಗೆ ಹಾಗೆನಿಸುತ್ತಿತ್ತು )ಬೈ ಎಂದು ಹೇಳಿ ನೀನು ಹೊರತು ಹೋದೆ .
ನಾಳೆ ಶಿವರಾತ್ರಿ ಹಬ್ಬದಂದು ಬಸವನ ಗುಡಿಯಾ ದೊಡ್ಡ ಗಣಪನ ಗುಡಿಗೆ ನೀನು ಬಂದೆ ಬರ್ತಿಯಾ ಅಂತ ಗೊತ್ತು ,ಅಲ್ಲಿ ನಿನಗಾಗಿ ಬೆಟ್ಟದಷ್ಟು ಪ್ರೀತಿಯನ್ನು ಜೊತೆಯಲ್ಲಿ ಇಟ್ಟುಕೊಂಡು ನೀ ಬರುವ ದಾರಿಯಲಿ ಕಾಯ್ತಿರ್ತೀನಿ .ಕನಸಿಗೆ ಬಂದವಳು ನೀನು ,ಮನಸಿಗೂ ಬಂದು ಬಿಡು .ಹಾಗೆ ಹೆಗಲು ತಬ್ಬಿಕೊಂಡು ಮೌನಕ್ಕೆ ಶರಣಾಗೋಣ ,ಮನಸ್ಸುಗಳು ಮಾತಾಡಿಕೊಳ್ಳಲಿ .ಬರ್ತೀಯ ಆಲ್ವಾ ???
ನಿನ್ನ ನಿರೀಕ್ಷೆಯಲಿ ನಾನು ........

ಗೂಡಾರ್ಥದ ಹಂಗೇಕೆ ನಮ್ಮ ಹಾಡಿಗೆ ?
ಕವಿತೆ ಸರಳರೇಖೆಯಂತಿರಬಾರದು
ನೂರು ಗೂಡಾರ್ಥಗಳ ಸೃಷ್ಟಿಸಿ
ಭಾವಗಳ ಅಬ್ಬರದಲ್ಲಿ ನೋವುಗಳ ಲಘುವಾಗಿಸಿ
ಸುಲಭಕ್ಕೆ ಅರ್ಥವಾಗಬಾರದು
ಅದರ ವಿನ್ಯಾಸ ,ಲಯ ,ವಿಸ್ತಾರಗಳೆಲ್ಲವೂ
ಕಣ್ಣಿಗೆ ಕಾಣುವ,ಕೈಗೆ ಸಿಗದ
ಕನ್ನಡಿಯೊಳಗಿನ ಗಂಟಿನಂತಿರಬೇಕು
ಹಾಗಂತ ಮೊನ್ನೆ ಕಾವ್ಯವನ್ನು
ಅರೆದು ಕುಡಿದಿರುವ ಪ್ರಕಾಂಡ ಪಂಡಿತರು
ಮೂರು ಮುಕ್ಕಾಲು ಜನ ಸೇರಿದ್ದ
ಸೆಮಿನಾರು ಒಂದರಲ್ಲಿ ಮಾತನಾದಿಕೊಂದರಂತೆ
ರದ್ದಿ ಆಯುವವನು ,ಮಾಂಸ ಮಾರುವವನು
ಮಿಟಾಯಿ ಅಂಗಡಿಯಲ್ಲಿ ನೊಣ ಹೊಡೆಯುವವನು
ಕವಿತೆಯ ಬಗ್ಗೆ ,ಅದರ ಸಾಚಾತನದ ಬಗ್ಗೆ
ಮಾತಿಗೆ ನಿಂತರೆ ಕವಿಯ
ಕಿಮ್ಮತ್ತೆನಾಗಬೇಕೆಂಬುದು
ಅವರ ಆತಂಕವಂತೆ ..
ಹೂವು, ಚಂದ್ರ ,ಬೆಳದಿಂಗಳು ಸಮುದ್ರ
ಮುಂತಾದ ಸುಂದರ ರೂಪಕಗಳ ಮುಂದೆ
ಕೊಚ್ಚಿ ಹೋದ ಬದುಕು,ಮಣ್ಣಿನಡಿಯಲ್ಲಿ ಕೊಳೆತ ದೇಹ
ಹಸಿವಿನ ಸಂಕಟ ,ಮತ್ತು ಸಾಲಕ್ಕೆ ಸತ್ತವನ
ವಿರೂಪ ಚಿತ್ರಗಳನ್ನು ಯಾರಾದರೂ
ಕಾವ್ಯಾವಾಗಿಸುತ್ತಾರೆನ್ರೀ ಎಂದು ತೂಕಡಿಸುತ್ತಿದ್ದ
ಸಭಿಕರ ಮುಂದೆ ಕಿಡಿ ಕಾರಿದರಂತೆ !
ಹಾಳಾಗಿ ಹೋಗಲಿ ಬಿಡಿ
ಟಿ ಎ ಡಿ ಎ ಸೌಖ್ಯದಲಿ
ಅಕಾದೆಮಿಗಳೆಂಬ ಹಾಳು ಕೊಂಪೆಯಲಿ
ಸ್ವರತಿ ಸುಖದಲಿ ಮೈಮರೆತ
ಸಜ್ಜನರ ಸಹವಾಸ ನಮಗೇಕೆ ?
ನೇಗಿಲಿನ ಪ್ರೀತಿಗೆ ಮಣ್ಣು ಮೃದುವಾಗಿ
ಬೀಜ ತೆನೆಯಾಗಿ ತೊನೆಯುವಂತೆ
ಪದ ಹುಟ್ಟುತಿರಲು ಗೂಢ ನಿಗೂಢಗಳ
ಹಂಗೇಕೆ ನಮ್ಮ ಹಾಡಿಗೆ ,ಇರಲಿ ಬಿಡಿ ಅದರ ಪಾಡಿಗೆ ...
Subscribe to:
Comments (Atom)